ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಕೇಂದ್ರ ಕಾರವಾರ ಹಾಗೂ ಕಾರವಾರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ nss ಘಟಕ ಇವರ ಸಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ನಡೆದ “Patriotism and National build” ಎಂಬ ವಿಷಯದ ಕುರಿತು ನಡೆದ ತಾಲೂಕ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ಅಭಿಷೇಕ್ ಕಳಸ ಪ್ರಥಮ, ಸಹನಾ ಸಯ್ಯದ್ ದ್ವಿತೀಯ, ಯೋಗೇಶ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ದಿನಾಂಕ 9/10/2018ರಂದು ನಡೆಯುವ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ ಆಯ್ಕೆಗೊಂಡಿರುತ್ತಾರೆ. ಆಯ್ಕೆಗೊಂಡಿರುವ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯರಾದ ಡಾಕ್ಟರ್ ಕಲ್ಪನಾ ಕೆರವಡಿಕರ, ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ ಐ ಕೆ ನಾಯ್ಕ್ , ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ನೆಹರು ಯುವ ಕೇಂದ್ರದ ಸಂಯೋಜಕರು ಸ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.