ಕುಮಟಾ: ತಾಲೂಕಿನ ಮಾದನಗೇರಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರಿಗೆ ತೀವ್ರವಾಗಿ ಪೆಟ್ಟಾಗಿದ್ದು ಸಾವನ್ನಪ್ಪಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಕುಮಟಾ ಕಾರವಾರ ಮಾರ್ಗ ಮಧ್ಯೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಅಪಘಾತ ಸಂಭವಿಸಿದ್ದು ಕಾರು ಸಂಪೂರ್ಣ ಜಖಂ ಗೊಂಡಿದೆ.
ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಎರಡು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದ್ದರೂ ಒಬ್ಬಾಕೆ ಉಸಿರಾಡುತ್ತಿದ್ದು ಹೊರಬತೆಗೆಯುವ ಯತ್ನ ನಡೆದಿದೆ ಎನ್ನಲಾಗಿದೆ.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಯಿತು.
ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ . ಇಲಾಖೆಯ ನಿಖರ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.