ಹೊನ್ನಾವರ: ಹೊನ್ನಾವರದ ಸೇಂಟ್ ಥೋಮಸ್ ಪ್ರೌಢಶಾಲೆ ವಿದ್ಯಾರ್ಥಿಗಳು ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದ ಸ್ಪರ್ಧೆಯಲ್ಲಿ ವಿಜೇತರಾಗಿ ವಿಭಾಗ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಜಲ್ ಭಟ್ 400 ಮೀ, ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದರೆ, ಆಶೀತಾ, ನಾಗವಿ, ಕಾವ್ಯ ಖೋ-ಖೋ ಆಟದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.ಅಲ್ಲದೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸುಜಯ ಉಪ್ಪಾರ 400 ಮೀ. ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ಮಕ್ಕಳ ಸಾಧನೆಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ. ರಾಮಚಂದ್ರ ನಾಯ್ಕ ಹಾಗೂ ಶ್ರೀಮತಿ ಎ.ಸಿ.ಅನ್ನಮ್ಮ ಇವರಿಗೂ ಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿ ಅಭಿನಂದಿಸಿದೆ.