ಯಲ್ಲಾಪುರ: ಪಟ್ಟಣ ಸಮೀಪದ ಬಿಸಗೋಡ ಕ್ರಾಸ್ ಬಳಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸಂಭವಿಸಿದ ಘಟನೆ ಇದೀಗ ವರದಿಯಾಗಿದೆ.
ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆ ತೆರಳುತಿದ್ದ ಬಸ್ ಹಾಗೂ ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹಾಗೂ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ.
ಬಸ್ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗಟಾರಕ್ಕೆ ಬಿದ್ದಿದ್ದು ಮೇಲೆತ್ತುವ ಯತ್ನ ನಡೆದಿದೆ. ಪೋಲೀಸರು ಸ್ಥಳದಲ್ಲಿ ಹಾಜರಿದ್ದು ಕಾರ್ಯಾಚರಣೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.