ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
ಈ ಪ್ರತಿಷ್ಠಿತ ವಾಲ್ಮೀಕಿ ಪ್ರಶಸ್ತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಶ್ರಮಿಸಿದವರಿಗೆ ನೀಡಲಾಗುವುದು. ಈ ಬಾರಿ ಹೆಚ್.ಡಿ. ದೇವೇಗೌಡರು ಆಯ್ಕೆಯಾಗಿದ್ದಾರೆ.

RELATED ARTICLES  ಡಾ.ವೈ.ವಿ.ಕೆ ಯವರಿಗೆ ಶ್ರೀಭಾರತೀ ವಿದ್ಯಾಪೀಠದಿಂದ ಅಭಿವಂದನೆ

ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ನೇಮಿಸಿದ್ದ ವಾಲ್ಮಿಕಿ ಪ್ರಶಸ್ತಿ ಆಯ್ಕೆ ಸಮಿತಿ ಶಿಫಾರಿಸಿನಂತೆ ರಾಜ್ಯ ಸರ್ಕಾರ ಈ ಪ್ರಶಸ್ತಿಯನ್ನು ಹೆಚ್.ಡಿ.ದೇವೇಗೌಡರಿಗೆ ನೀಡಿ ಗೌರವಿಸಲು ಮುಂದಾಗಿದೆ.

ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಇಂದು ಹೆಚ್.ಡಿ. ದೇವೇಗೌಡ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಭೇಟಿ ಮಾಡಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

RELATED ARTICLES  ಇಂದು ಭಾರತ ಮಾರುಕಟ್ಟೆಗೆ ಭರ್ಜರಿ ಎಂಟ್ರಿ: Samsung Galaxy A7

ಅಕ್ಟೋಬರ್ 24 ಬುಧವಾರ ರಂದು ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.