ಹೊಸದಿಲ್ಲಿ : ದೇಶಾದ್ಯಂತ ಪಟಾಕಿ ಮಾರಾಟದ ಮೇಲೆ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹಾಗಾಗಿ, ಪರಿಸರಕ್ಕೆ ಕಡಿಮೆ ಪ್ರಮಾಣದಲ್ಲಿ ಹಾನಿ ಉಂಟುಮಾಡುವ, ಸುಡುಮದ್ದುಗಳನ್ನು ಮಾತ್ರವೇ ಮಾರುಕಟ್ಟೆಯಲ್ಲಿ ಮಾರುವುದಕ್ಕೆ ಅವಕಾಶ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ಇಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಆನ್ ಲೈನ್ನಲ್ಲಿ ಪಟಾಕಿಗಳನ್ನು ಮಾರಾಟ ಮಾಡುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದ್ದು, ಪರವಾನಿಗೆ ಪಡೆದ ಕೇವಲ ವ್ಯಾಪಾರಸ್ಥರಿಗೆ ಮಾತ್ರವೇ ಸುಡು ಮದ್ದುಗಳನ್ನು ಮಾರಾಟ ಮಾಡುವುದಕ್ಕೆ ಅವಕಾಶ ಇರುತ್ತದೆ ಎಂದು ನ್ಯಾಯಾಧೀಶ ಅರ್ಜನ್ ಕುಮಾರ್ ಹೇಳಿದರು ಎಂದು ತಿಳಿದುಬಂದಿದೆ.