ನವದೆಹಲಿ: 2018ನೇ ಸಾಲಿನ ಸಿಯೋಲ್ ಶಾಂತಿ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಸಹಕಾರ ಮತ್ತು ಜಾಗತಿಕ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡಿದ್ದನ್ನು ಪರಿಗಣಿಸಿ ಪ್ರಶಸ್ತಿಗೆ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.

ರಿಪಬ್ಲಿಕ್ ಕೊರಿಯಾ ಜೊತೆಗಿನ ಭಾರತದ ಸಂಬಂಧವನ್ನು ಇನ್ನಷ್ಟುಗಟ್ಟಿಗೊಳಿಸುವ ಉದ್ದೇಶದಿಂದ ಪ್ರಶಸ್ತಿ ಸ್ವೀಕರಿಸಲು ಮೋದಿ ಅವರು ಒಪ್ಪಿಕೊಂಡಿದ್ದಾರೆ. ತಮ್ಮನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಮೋದಿ ಅವರು ಕೃತಜ್ಞತೆ ಅರ್ಪಿಸಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ ಎಂದು ತಿಳಿದುಬಂದಿದೆ.

RELATED ARTICLES  ಪತಿ ಪತ್ನಿಯ ನಡುವೆ ವೈಮನಸ್ಸು : ಸಾವಿಗೆ ಶರಣಾದ ಮಹಿಳೆ

ಮೋದಿ ಅವರನ್ನು, ವಿಶ್ವವು ಬರಮಾಡಿಕೊಂಡಿದೆ. ಮೋದಿನೋಮಿಕ್ಸ್ ಎಂಬ ಪರಿಕಲ್ಪನೆಯ ಮೂಲಕವಿಶ್ವ ಮತ್ತು ಭಾರತದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿದ್ದನ್ನು ಪರಿಗಣಿಸಿ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿ- 2018ಕ್ಕೆ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿ ರವೀಶ್ ಕುಮಾರ ಟ್ವೀಟ್ ಮಾಡಿದ್ದಾರೆ.

RELATED ARTICLES  ಹೊನ್ನಾವರದಲ್ಲಿ ಗಲಬೆ! ಕಾಣೆಯಾದ ಯುವಕ ಶವವಾಗಿ ಪತ್ತೆ?

ಮೋದಿ ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ 14ನೇ ವ್ಯಕ್ತಿಯಾಗಿದ್ದಾರೆ.

ಈ ಪ್ರಶಸ್ತಿಯು ಕೋರಿಯಾ ಜನರ ಶಾಂತಿ ಬಯಕೆಯ ಧ್ಯೋತಕವಾಗಿ 1990ರಲ್ಲಿ ಸ್ಥಾಪಿಸಲಾದ ಸಿಯೋಲ್ ಶಾಂತಿ ಪ್ರಶಸ್ತಿ ಸ್ಥಾಪಿಸಲಾಗಿದೆ.