ಶಿರಸಿ:ಮೇಲಿಂದ ಮೇಲೆ ನಡೆಯುತ್ತಿರುವ ಅಪಘಾತಗಳು ಉತ್ತರ ಕನ್ನಡದ ಜನರನ್ನು ಕಂಗಾಲು ಮಾಡುತ್ತಿದೆ. ಮತ್ತೆ ಶಿರಸಿಯಲ್ಲಿ ನಡೆದ ಈ ಘಟನೆ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಕಾರು- ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಭೈರುಂಬೆ ಬಳಿ ಗುರುವಾರ ತಡರಾತ್ರಿ ನಡೆದಿದೆ.

RELATED ARTICLES  ಎಸ್‌.ಡಿ.ಎಂ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 'ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಮತ್ತು ಸಾಧನೆ' ಕುರಿತು ಉಪನ್ಯಾಸ ಕಾರ್ಯಕ್ರಮ

ಈ ಅಪಘಾತದಲ್ಲಿ ಶ್ರೀಮುಖ ನರಸಿಂಹ ಹೆಗಡೆ (20) ಮೃತ ಪಟ್ಟ ವಿದ್ಯಾರ್ಥಿಯಾಗಿದ್ದು, ಈತ ಎಮ್.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಕಾಮ್ ವ್ಯಾಸಾಂಗ ಮಾಡುತ್ತಿದ್ದ.

RELATED ARTICLES  ಕಾರವಾರ : ಸಾಮಾನ್ಯ ಸಭೆಯಲ್ಲಿ ಕೆಪಿಸಿ ಅಧಿಕಾರಿಗಳು ತರಾಟೆಗೆ

ಯಲ್ಲಾಪುರ ಕಡೆಯಿಂದ ಶಿರಸಿಗೆ ಬರುತ್ತಿದ್ದಾಗ ಕಾರೊಂದಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗ್ರಾಮೀಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.