ಹೆಚ್ಚಾಗಿ ಉತ್ತರ ಭಾರತದಲ್ಲಿ ಜನರು ತಿನ್ನುವ ಆಹಾರಗಳಲ್ಲಿ ಹೆಸರುವಾಸಿಯಾಗಿರುವ ಆಲೋ ಪರೋಟಾವು ಒಂದು . ದಕ್ಷಿಣದಲ್ಲಿ ದೋಸೆ, ಇಡ್ಲಿ ಹೇಗೆ ಖ್ಯಾತಿಯನ್ನು ಪಡೆದುಕೊಂಡಿದೆಯೋ ಅಂತೆಯೇ ಉತ್ತರದಲ್ಲಿ ಆಲೂ ಪರೋಟಾ ಅಲ್ಲಿನವರಿಗೆ ಹೆಚ್ಚು ಪ್ರಿಯವಾದುದು. ಆಲೂಗಡ್ಡೆ ಪಲ್ಯದೊಂದಿಗೆ ತಯಾರು ಮಾಡಲಾದ ಈ ಪರೋಟಾ ರೆಸಿಪಿ ಆರೋಗ್ಯಕರ ಬ್ರೇಕ್ ಫಾಸ್ನಂತೆ ಕೂಡ ಸೇವಿಸಬಹುದು ಮಧ್ಯಾಹ್ನದೂಟಕ್ಕೂ ಓಕೆಯಾಗಿರುವಂತಹದ್ದು, ಹಾಗಿದ್ದರೆ ಅತಿ ಸರಳ ವಿಧಾನದಲ್ಲಿ ಆಲೂ ಪರೋಟಾವನ್ನು ತಯಾರು ಮಾಡುವುದು ಹೇಗೆ ಎಂಬುದನ್ನು ನೋಡೋಣ.
ಬೇಕಾಗುವ ಸಾಮಾಗ್ರಿಗಳು:
*3-4 ಬೇಯಿಸಿ ಸಿಪ್ಪೆ ಸುಲಿದ ಆಲೂಗಡ್ಡೆ
*1 ಅಥವಾ 2 ಹಸಿಮೆಣಸು
*1/2 ಚಮಚ ಮೆಣಸಿನ ಹುಡಿ
*1/2 ಚಮಚ ಅಮೆಚೂರ್ ಹುಡಿ
*2 ರಿಂದ 3 ಚಮಚ ಕೊತ್ತಂಬರಿ ಸೊಪ್ಪು ಸಣ್ಣಗೆ ಹೆಚ್ಚಿದ್ದು
*ಉಪ್ಪು ರುಚಿಗೆ ತಕ್ಕಷ್ಟು
*ಎಣ್ಣೆ ಅಥವಾ ತುಪ್ಪ ಪರೋಟಾ ಬೇಯಿಸಲು ಪರೋಟಾ ತಯಾರಿಗೆ
*2 ಕಪ್ ಗೋಧಿ ಹಿಟ್ಟು
*1/2 ಚಮಚ ಉಪ್ಪು
*1-2 ಚಮಚ ತುಪ್ಪ ಅಥವಾ ಎಣ್ಣೆ
*ಹಿಟ್ಟು ಕಲಸಲು ಸಾಕಷ್ಟು ನೀರು
*ಮೊದಲಿಗೆ ಆಲೂಗಡ್ಡೆಯನ್ನು ಬೇಯಿಸಿ ಸಿಪ್ಪೆ ಸುಲಿದಿಟ್ಟುಕೊಳ್ಳಿ. ನಂತರ ಅದನ್ನು ಚೆನ್ನಾಗಿ ಹಿಸುಕಿ ಹಸನಾಗಿಸಿಕೊಳ್ಳಿ
* ಆಲೂಗಡ್ಡೆಯನ್ನು ಚೆನ್ನಾಗಿ ಹಿಸುಕಿಕೊಂಡಿರಿ ಯಾವುದೇ ಗಂಟುಗಳಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ.
* ಇದೀಗ ಸಣ್ಣಗೆ ಹೆಚ್ಚಿದ ಹಸಿಮೆಣಸನ್ನು, ಗರಮ್ ಮಸಾಲಾ ಪೌಡರ್, ಮೆಣಸಿನ ಹುಡಿ, ಅಮೆಚೂರ್ ಹುಡಿ ಮತ್ತು ಉಪ್ಪನ್ನು ಆಲೂ ಪಲ್ಯಕ್ಕೆ ಸೇರಿಸಿ, ಬೇಕಾದಲ್ಲಿ ಕರಿಬೇವು ಮತ್ತು ಸಣ್ಣಗೆ ಹೆಚ್ಚಿನ ಈರುಳ್ಳಿಯನ್ನು ಆಲೂ ಜೊತೆಗೆ ಮಿಶ್ರ ಮಾಡಿಕೊಳ್ಳಿ.
*ಪರೋಟಾಗಾಗಿ ಗೋಧಿ ಹಿಟ್ಟು ಕಲಸುವ
ತಯಾರಿಸುವ ವಿಧಾನ:
ಪಾತ್ರೆಯಲ್ಲಿ, ಗೋಧಿ ಹಿಟ್ಟನ್ನು ತೆಗೆದುಕೊಂಡು ಉಪ್ಪು ಎಣ್ಣೆ ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ. ಸ್ವಲ್ಪ ಸಮಯ ಕಲಸಿದ ಹಿಟ್ಟನ್ನು ಹಾಗೆಯೇ ತೆಗೆದಿಡಿ.
ಮಾಡುವ ವಿಧಾನ:
1. ಮೊದಲಿಗೆ ನಾದಿದ ಚಪಾತಿ ಹಿಟ್ಟನ್ನು ಪೂರಿ ಗಾತ್ರಕ್ಕೆ ಲಟ್ಟಿಸಿಕೊಳ್ಳಿ. ನಂತರ ಮಧ್ಯಭಾಗಕ್ಕೆ ಆಲೂ ಪಲ್ಯವನ್ನಿಟ್ಟು ನಾಲ್ಕೂ ಭಾಗ ಮಡಚಿಕೊಳ್ಳಿ.
2. ಸ್ವಲ್ಪ ಗೋಧಿ ಹಿಟ್ಟನ್ನು ತೆಗೆದುಕೊಂಡು ಕಲಸಿದ ಉಂಡೆಯನ್ನು ಲಟ್ಟಿಸಿಕೊಳ್ಳಿ ಆದಷ್ಟು ಮೃದುವಾಗಿ ಲಟ್ಟಿಸಿ. ಬಿರುಸಾಗಿ ಲಟ್ಟಿಸಿದಲ್ಲಿ ಪಲ್ಯ ಹೊರಕ್ಕೆ ಬರಬಹುದು.
3. ಗ್ಯಾಸ್ನಲ್ಲಿ ತವಾ ಇಟ್ಟುಕೊಂಡು 1/2 ಚಮಚದಷ್ಟು ಎಣ್ಣೆ ಹಾಕಿ. ತವಾ ಕಾಯುತ್ತಿದ್ದಂತೆ ನಿಧಾನವಾಗಿ ಲಟ್ಟಿಸಿದ ಪರೋಟಾವನ್ನು ತವಾದಲ್ಲಿರಿಸಿ. ಬೇಕಾದಷ್ಟು ಎಣ್ಣೆಯನ್ನು ಹಾಕಿ ಎರಡೂ ಬದಿ ಚೆನ್ನಾಗಿ ಬೇಯಿಸಿಕೊಳ್ಳಿ.
4.ಇದೇ ರೀತಿ ಉಳಿದ ಪರೋಟಾಗಳನ್ನು ಸಿದ್ಧಪಡಿಸಿಕೊಳ್ಳಿ.