ನವದೆಹಲಿ : 2016 ರಲ್ಲಿ ವಾಯುಮಾಲಿನ್ಯದಿಂದಾಗಿ ಐದು ವರ್ಷದೊಳಗಿನ 1.25 ಲಕ್ಷಕ್ಕೂ ಅಧಿಕ ಮಕ್ಕಳು ಭಾರತದಲ್ಲಿ ಅಸುನೀಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಹೇಳಿದೆ ಎಂದುತಿಳಿದುಬಂದಿದೆ.

ಕೆಳ ಮತ್ತು ಮಧ್ಯಮ ಆದಾಯದ ರಾಷ್ಟ್ರಗಳಲ್ಲಿ ಈ ಪ್ರಮಾಣ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ವಾಯುಮಾಲಿನ್ಯ ಮತ್ತು ಆರೋಗ್ಯ ಸಮ್ಮೇಳನದಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ ಎನ್ನಲಾಗಿದೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 27-02-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

ಭಾರತದಲ್ಲಿ ಮನೆಯೊಳಗೆ ಸೃಷ್ಟಿಯಾಗುವ ವಾಯುಮಾಲಿನ್ಯದಿಂದ ಐದು ವರ್ಷದೊಳಗಿನ 67 ಸಾವಿರ ಮಕ್ಕಳು ಮೃತಪಟ್ಟಿದ್ದಾರೆ. ಹೊರಭಾಗದ ವಾಯುಮಾಲಿನ್ಯದಿಂದಾಗಿ ಅಂದರೆ ಕಲುಷಿತ ಗಾಳಿ ಸೇವಿಸಿ ಸರಿಸುಮಾರು 61 ಸಾವಿರ ಐದು ವರ್ಷದೊಳಗಿನ ಮಕ್ಕಳು ಭಾರತದಲ್ಲಿ ಮೃತಪಟ್ಟಿವೆ ಎಂದು ಅಧ್ಯಯನದ ವರದಿ ಹೇಳಿದೆ.

RELATED ARTICLES  ಶ್ರೀಗಳನ್ನು ದೋಷಮುಕ್ತಗೊಳಿಸಿದ ತೀರ್ಪಿನಲ್ಲಿ, ಯಾವುದೇ ಅನೈತಿಕ ಸಂಬಂಧವಿತ್ತೆಂದು ಹೇಳುವ ವಿಚಾರಗಳಿಲ್ಲ - ನ್ಯಾಯಾಲಯ

ಮುಂದಿನ ದಿನಗಳಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ವಹಿಸಬೇಕಾಗ ಎಚ್ಚರಿಕೆ ಮೇಲೆ ಬೆಳಕು ಚೆಲ್ಲುತ್ತದೆ. ಕಲುಷಿತ ಹೊಗೆ ಮತ್ತು ಗಾಳಿ ಪ್ರತಿವರ್ಷ ಲಕ್ಷಾಂತರ ಮಕ್ಕಳನ್ನು ಬಲಿತೆಗೆದುಕೊಳ್ಳುತ್ತಿದ್ದು ಇದರಿಂದ ಜನಜೀವನವೇ ಹಾಳಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕ ಡಾ ಟೆಡ್ರೊಸ್ ಅತಾನೊಮ್ ಘೆಬ್ರೈಸಸ್ ಹೇಳಿದ್ದಾರೆ ಎಂದು ವರದಿಯಾಗಿದೆ.