ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್‍ನಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಬಿ.ಸಿ.ಎ ಕಾಲೇಜಿನ ವಿದ್ಯಾರ್ಥಿಯಾದ ಕುಮಾರ ನಿಖಿಲ ನಾಗರಾಜ ಶಾನಭಾಗ ಇವರು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಭಟ್ಕಳದ ಶ್ರೀಮತಿ ಧನಶ್ರೀ ಹಾಗೂ ಕ್ರೀಡಾಪಟು ಶ್ರೀ ನಾಗರಾಜ ಶಾನಭಾಗರವರ ಪುತ್ರರಾದ ಇವರು ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಯನ್ನು ಗಳಿಸಿರುತ್ತಾರೆ. ಇವರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿರುತ್ತಾರೆ.