ಕುಮಟಾ :ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಕುಮಟಾದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ದಿನಕರ್ ಕೆ. ಶೆಟ್ಟಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕುಮಟಾ ತಾಲೂಕಿನಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಎಲ್ಲ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿಯುವಂತಾಗಬೇಕು ಆಗ ಮಾತ್ರ ಈ ರಾಜ್ಯೋತ್ಸವಕ್ಕೆ ಅರ್ಥ ಬರುತ್ತದೆ ಎಂದರು.
ಅನೇಕ ಮಹಾನ್ ನಾಯಕರು ಇಂದಿನವರೆಗೂ ಕನ್ನಡಿಗರು ಕನ್ನಡನಾಡಿನ ಸಂಸ್ಕೃತಿ ಸಂಪ್ರದಾಯಗಳ ಉಳಿವಿಗಾಗಿ ಶ್ರಮಿಸುತ್ತಾ ಬರುತಿದ್ದಾರೆ ಹಾಗೆಯೆ ನಾವು ಕನ್ನಡ ನಾಡುನುಡಿಗಾಗಿ ತ್ಯಾಗ,ತಾಳ್ಮೆ ,ಪ್ರೀತಿ ,ಸಹನೆಯ ಮನೋಭಾವಗಳನ್ನೂ ಬೆಳೆಸಿ ಉಳಿಸಿಕೊಂಡೂ ಮುಂದಿನ ಪ್ರಜೆಗಳಿಗೆ ಮಾದರಿಯಾಗಬೇಕಾದುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಅವರು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು,ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಶ್ರೀಧರ ಉಪ್ಪಿನ ಗಣಪತಿ,ತಹಶೀಲ್ದಾರ ಮೇಘರಾಜ ನಾಯ್ಕ,ಸಿ.ಟಿ ನಾಯ್ಕ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಲಲಿತಾ ಪಟಗಾರ ಹಾಗೂ ಇನ್ನಿತರ ಪ್ರಮುಖರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ನಡೆದ ಕನ್ನಡಮ್ಮನ ಮೆರವಣಿಗೆ ಆಕರ್ಷಕವಾಗಿತ್ತು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಸರತಿಯ ಸಾಲಿನಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡರು.