ಕಾರವಾರ: ಈ ವರ್ಷವೂ ಟಿಪ್ಪು ಜಯಂತಿ ಆಚರಣೆಯನ್ನು ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಖಂಡಿಸಿದ್ದಾರೆ.
ನವೆಂಬರ್ 10 ರಂದು ಸರ್ಕಾರದ ವತಿಯಿಂದ ನಡೆಯಲಿರುವ ಟಿಪ್ಪು ಜಯಂತಿಯ ಆಚರಣೆಯ ಆಹ್ವಾನ ಪತ್ರಿಕೆಯಲ್ಲಿ, ತಮ್ಮ ಹೆಸರನ್ನು ಹಾಕದಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅವರು ಪತ್ರ ಬರೆದಿದ್ದಾರೆ.
ಕೌಶಲ್ಯ ಅಭಿವೃದ್ಧಿ ಇಲಾಖೆಯ ವಿಶೇಷ ಕರ್ತವ್ಯ ಅಧಿಕಾರಿ ವಿಜಯ್ಕುಮಾರ್ ತೋರಗಲ್ ಅವರಿಂದ ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ ಪತ್ರ ಕಳುಹಿದ್ದಾರೆ ಎನ್ನಲಾಗಿದೆ.
ಟಿಪ್ಪು ಕನ್ನಡ ವಿರೋಧಿ ಮತ್ತು ಹಿಂದೂ ವಿರೋಧಿ, ಟಿಪ್ಪು ಸಮಾಜಘಾತುಕ ಆತನ ವೈಭವಿಕರಣ ಸರಿಯಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈಗಷ್ಟೇ ಅಲ್ಲದೇ ಟಿಪ್ಪು ಜಯಂತಿ ಆಚರಣೆ ಬಗ್ಗೆ ಮೊದಲಿಂದಲೂ ವಿರೋಧ ವ್ಯಕ್ತಪಡಿಸಿದ್ದ ಅನಂತ ಕುಮಾರ ಟಿಪ್ಪು ಜಯಂತಿಯಲ್ಲಿ ಹೆಸರು ಹಾಕಿದರೆ ವೇದಿಕಯಲ್ಲಿ ಟಿಪ್ಪುವಿನ ಹಿಂದೂ ವಿರೋಧಿ ಕೃತ್ಯದ ಬಗ್ಗೆ ಎಳೆ ಎಳೆಯಾಗಿ ಬಿಡಿಸಿಡುವುದಾಗಿ ಹಿಂದೆಯೂ ಹೇಳಿದ್ದರು.