ಕಾರವಾರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕರ್ನಾಟಕ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವವನ್ನು ಅಮದಳ್ಳಿಯ ವೀರಗಣಪತಿ ಸಭಾಂಗಣದಲ್ಲಿ ಇತ್ತೀಚಿಗೆ ಆಯೋಜಿಸಲಾಗಿತ್ತು.
ಇದರಲ್ಲಿ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ B.S.C ಅಂತಿಮ ವರ್ಷದ ವಿದ್ಯಾರ್ಥಿಯಾದ ಅಭಿಷೇಕ್ ಗೋವಿಂದರಾಯ ಕಳಸ .ಆಶುಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು . ತುಮಕೂರಲ್ಲಿ ನಡೆಯುವ ರಾಜ್ಯ ಮಟ್ಟದ ಯುವಜನೋತ್ಸವ ಆಯ್ಕೆಯಾಗಿರುತ್ತಾನೆ.
ಆಯ್ಕೆಯಾಗಿರುವ ವಿದ್ಯಾರ್ಥಿಯ ಅತ್ಯುತ್ತಮ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು ಡಾ. ಕಲ್ಪನಾ ಕೆವಡಿಕರ್ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ