ಬೆಂಗಳೂರು: ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ.
ಅನಂತಕುಮಾರ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಇಂದು ನಸುಕಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಬೆಳಗ್ಗೆ 9 ಗಂಟೆಯ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸ್ಥಳಕ್ಕೆ ದಕ್ಷಿಣ ವಿಭಾಗ ಪೊಲೀಸರಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಮನಸ್ಸು, ಹೃದಯ ತುಂಬಾ ಭಾರವಾಗಿದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅನಂತ ಕುಮಾರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಮನಸ್ಸು , ಹೃದಯ ತುಂಬಾ ಭಾರವಾಗಿದೆ.ಪ್ರೀತಿಯ ಸ್ನೇಹಿತ , ಸಹೋದರ , ಅನಂತಕುಮಾರ್ ಇನ್ನಿಲ್ಲವೆಂಬ ಸತ್ಯ ಎಷ್ಟೊಂದು ಕಠೋರ ಎಂದು ಬರೆದು ಡಿವಿಎಸ್ ಟ್ವೀಟ್ ಮಾಡಿದ್ದಾರೆ.
ಅನಂತ್ ಕುಮಾರ್ ನಿಧನಕ್ಕೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ ಎಂದು ತಿಳಿದುಬಂದಿದೆ.