ಬೆಂಗಳೂರು: ಚಾಮರಾಜಪೇಟೆಯ ಹಿಂದೂ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ನಾಳೆ ಮಧ್ಯಾಹ್ನ 1 ಗಂಟೆಗೆ ನಡೆಸಲಾಗುವುದು.
ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ- ವಿದೇಶಗಳ ಗಣ್ಯರು ಅಂತಿಮ ದರ್ಶನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಅನಂತಕುಮಾರ್ ಅವರ ಪಾರ್ಥೀವ ಶರೀರವನ್ನು ಇಂದು ಇಡೀ ದಿನ ಅವರ ಮನೆಯಲ್ಲಿ ಇಡಲಾಗುವುದು, ನಾಳೆ ಬೆಳಗ್ಗೆ 8 ಗಂಟೆಗೆ ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಗೆ ಕೊಂಡೊಯ್ದು 9ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ 10 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನದಲ್ಲಿ ಇಡಲಾಗುವುದು ಎಂದು ಹೇಳಿದ್ದಾರೆ ಎನ್ನಲಾಗಿದೆ.
.