ಹೊನ್ನಾವರ:- ಸ್ಕಾರ್ಪಿಯೋ ಕಾರೊಂದು ಗುಡ್ಡಕ್ಕೆ ಡಿಕ್ಕಿಹೊಡೆದ ಘಟನೆ ಹೊನ್ನಾವರದಿಂದ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಸ್ಥಳದಲ್ಲಿಯೇ ಮೂರು ಜನರು ಸಾವುಕಂಡಿದ್ದು ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೊಳ್ಳಿ ಕ್ರಾಸ್ ಬಳಿ ನಡೆದಿದೆ.

RELATED ARTICLES  ಯಶಸ್ವಿಯಾಗಿ ಸಂಪನ್ನವಾದ ಶರಾವತಿ ಆರತಿ.

ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ಕಾರು ಅಪಘಾತವಾಗಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಆನಂದಪುರ ಮೂಲದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗೋವಾದಲ್ಲಿ ಮದುವೆ ಕಾರ್ಯ ಮುಗಿಸಿ ವಾಪಸಾಗುತ್ತಿದ್ದಾಗ ಬೆಳಗಿನ ಜಾವ ಈ ಅಪಘಾತ ನಡೆದಿದೆ.ಫಾತಿಮಾ,ರುಕಿಯಾ,ಚಾಬುಸಾಬ್ ಸ್ಥಳದಲ್ಲೇ ಸಾವುಕಂಡ ದುರ್ದೈವಿಗಳು.

RELATED ARTICLES  ಕುಮಟಾದಲ್ಲಿ ನಿಲ್ಲದ ಕೊರೋನಾ ಆರ್ಭಟ: ಒಂದೇ ದಿನ ಅರ್ಧ ಶತಕದ ಸನಿಹ ಬಂದ ಪಾಸಿಟೀವ್ ಪ್ರಕರಣ

ಕಾರಿನಲ್ಲಿದ್ದ ಆರು ಜನರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

 

ಈ ಬಗ್ಗೆ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.