ಚೆನ್ನೈ:ಅಂಡಮಾನ್ ನಿಕೋಬಾರ್ ಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ‘ಗಜ’ ಚಂಡಮಾರುತವಾಗಿ ಬದಲಾಗಿದೆ. ಇದರ ಪರಿಣಾಮವಾಗಿ ನವೆಂಬರ್ .15ರಿಂದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಗಜ ಚಂಡಮಾರುತ ಗುರುವಾರ ಮಧ್ಯಾಹ್ನ ಹೊತ್ತಿಗೆ ತಮಿಳುನಾಡಿನ ಆರು ಜಿಲ್ಲೆಗಳ ಕಡಲ ಕಿನಾರೆಗೆ ಬಂದಪ್ಪಳಿಸುವ ಸಾಧ್ಯತೆ ತೀವ್ರವಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಆರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಗಜ ಚಂಡಮಾರುತ ಪಶ್ಚಿಮ ಮತ್ತು ನೈರುತ್ಯ ದಿಕ್ಕಿನತ್ತ ಪ್ರತಿ ಗಂಟೆಗೆ 10 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತಿದ್ದು ಚೆನ್ನೈಯಿಂದ 490 ಕಿಲೋ ಮೀಟರ್ ಮತ್ತು ನಾಗಪಟ್ಟಿಂನಿಂದ ಪೂರ್ವ ಮತ್ತು ಈಶಾನ್ಯ ದಿಕ್ಕಿಗೆ ಬೀಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ಎಂದು ರಾಜ್ಯ ಕಂದಾಯ ಸಚಿವ ತಿಳಿಸಿದ್ದಾರೆ.

RELATED ARTICLES  ನಾರಾಯಣ ಭಾಗ್ವತ್ ರಿಗೆ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಗಜ ಚಂಡಮಾರುತ ಪ್ರತಿ ಗಂಟೆಗೆ 100 ಕಿಲೋ ಮೀಟರ್ ವೇಗದಲ್ಲಿ ತಮಿಳುನಾಡಿನ ಉತ್ತರ ಕರಾವಳಿ ಭಾಗದಲ್ಲಿ ಅಪ್ಪಳಿಸಲಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

RELATED ARTICLES  ಕ್ರಿಯಾಶೀಲ ಚಿಂತನೆಯ ಸಾಕಾರ : ಸಂದೀಪ ಭಟ್ಟರ WhatsApp School…!

ಚಂಡಮಾರುತದಿಂದಾಗಿ ನಾಗಪಟ್ಟಿಂ, ತಂಜಾವೂರು, ಪುದುಕೊಟ್ಟೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳಲ್ಲಿ ಸಮುದ್ರ ನೀರಿನ ಒಳಹರಿವು ಹೆಚ್ಚಾಗಲಿದೆ. ಇದರಿಂದ ಗುಡಿಸಲುಗಳು, ವಿದ್ಯುತ್ ಮತ್ತು ಟೆಲಿಕಾಂ ಕೇಬಲ್ ಸೇವೆಗಳಿಗೆ ಹಾನಿಗೀಡಾಗಬಹುದು. ಗಿಡ-ಮರಗಳು ನೆಲಕ್ಕುರುಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡು ಮತ್ತು ಪುದುಚೆರಿ ಕರಾವಳಿ ತೀರ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ ಎಂದು ವರದಿಯಾಗಿದೆ.