ಬೆಂಗಳೂರು: ಇಂದು ಅನಿತಾ ಕುಮಾರಸ್ವಾಮಿಯವರು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಗೋಪಾಲಯ್ಯ ಸೇರಿದಂತೆ ಹಲವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ 3.23ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿತ್ತು. ಹೀಗಾಗಿ ಅನಿತಾ ಕುಮಾರಸ್ವಾಮಿ 25 ನಿಮಿಷ ಮುಂಚಿತವಾಗಿ ಸ್ಪೀಕರ್ ಕಚೇರಿಗೆ ಆಗಮಿಸಿದ್ದರು ಎನ್ನಲಾಗಿದೆ. .

RELATED ARTICLES  ಪೇಟೆಗೆ ಲಗ್ಗೆ ಇಟ್ಟಿದೆ ತರಹೇವಾರಿ ಹಣತೆ, ದೀಪಗಳ ಹಬ್ಬಕ್ಕೆ ಸಿದ್ಧವಾಗುತ್ತಿದ್ದಾರೆ ಜನರು

ರಾಮನಗರ ವಿಧಾನಸಭಾ ಉಪಚುನಾವಣೆಯಲ್ಲಿ 1,09,137 ಮತಗಳ ಅಂತರದಿಂದ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಅನಿತಾ ಕುಮಾರಸ್ವಾಮಿ ಅವರು ಒಟ್ಟು 1,48,168 ಮತಗಳನ್ನು ಪಡೆದಿದ್ದರು.

ಅನಿತಾ ಕುಮಾರಸ್ವಾಮಿಯವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನನ್ನ ಪತಿಯವರೇ ಮುಖ್ಯಮಂತ್ರಿ ಆಗಿದ್ದಾರೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತೇನೆ. ಮಂತ್ರಿಸ್ಥಾನ ನೀಡಿ ಎಂದು ಡಿಮ್ಯಾಂಡ್ ಮಾಡಲ್ಲ. ನಾನು ರಾಮನಗರದ ಮೊದಲ ಮಹಿಳಾ ಶಾಸಕಿಯಾಗಿದ್ದು ನನ್ನನ್ನು ಆಯ್ಕೆ ಮಾಡಿದ ಜನತೆಗೆ ಕೃತಜ್ಞತೆ ಹೇಳುತ್ತೇನೆ ಎಂದು ತಿಳಿಸಿದರು ಎಂದು ವರದಿಯಾಗಿದೆ.

RELATED ARTICLES  ಜನ ಅಧಿಕಾರ ಕೊಟ್ಟರೆ ಸರ್ಕಾರ. ಇಲ್ಲದಿದ್ದರೆ ಪ್ರತಿಪಕ್ಷದಲ್ಲಿ ಕುಳಿತುಕೊಳ್ಳುತ್ತೇವೆ : ಎಚ್‌.ಡಿ.ದೇವೇಗೌಡ.