ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾದ ಪರಿಣಾಮ ಶುಕ್ರವಾರವೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.
ಇದರಿಂದ ಭಾರತದ ಆಮದು ವೆಚ್ಚ ಇಳಿಕೆಯಾಗಿ ಹಣದುಬ್ಬರ ಕೂಡ ತಗ್ಗುವ ನಿರೀಕ್ಷೆ ಇದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 65 ಡಾಲರ್ ಗೆ ಬುಧವಾರ ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನ ಅವಧಿಯಲ್ಲಿ ತೈಲ ದರ ಇಳಿಕೆಯಾಗಿರುವುದು ಭಾರತಕ್ಕೆ ಅನುಕೂಲಕರವಾಗಿದೆ.
ಸತತ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಇಂದೂ ಕೂಡ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಇಂದು ಪೆಟ್ರೋಲ್ ದರಲ್ಲಿ 18 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 16 ಪೈಸೆಯಷ್ಟು ಇಳಿಕೆ ಕಂಡು ಬಂದಿದೆ. ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 77.10ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 71.93 ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 77.72 ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 72.31 ರೂಗೆ ಇಳಿಕೆಯಾಗಿದೆ ಎಂದು ವರದಿಯಾಗಿದೆ.