ಹೊನ್ನಾವರ: ಶರಾವತಿ ನದಿಯಲ್ಲಿ ಗುರುವಾರ ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರು ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ತಾಲೂಕಿನ ಇಡಗುಂಜಿಯಲ್ಲಿ ಪರಮೇಶ್ವರ ಅಂಬಿಗ ಮತ್ತು ಗಣಪತಿ ಅಂಬಿಗ ಮೀನುಗಾರಿಕೆಗೆ ತೆರಳಿದ್ದು ನಾಪತ್ತೆ ಯಾಗಿದ್ದರು. ಇದೀಗ ಅವರು ಮೃತಪಟ್ಟಬಗ್ಗೆ ವರದಿಯಾಗಿದ್ದು ಶವವಾಗಿ ಪತ್ತೆಯಾಗಿದ್ದಾರೆ.
ಗುರುವಾರ ಮೀನುಗಾರಿಕೆಗೆ ತೆರಳಿದ್ದ ಈ ಇಬ್ಬರು ರಾತ್ರಿಯಾದರೂ ವಾಪಸ್ಸಾಗಿರಲಿಲ್ಲ. ಇದರಿಂದ ಆತಂಕಕ್ಕೊಳಗಾದ ಮನೆಯವರು ಹುಡುಕಾಟ ನಡೆಸಿದ್ದರು. ನದಿಯಲ್ಲಿ ಹುಡುಕಾಟ ನಡೆಸಿದ ಊರಿನ ನಾಗರೀಕರು ಇವರನ್ನು ಪತ್ತೆಹಚ್ಚಿದ್ದಾರೆ ಎಂದು ವರದಿಯಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.