ಬೆಂಗಳೂರು : ಕಬ್ಬು ಬೆಳೆಗೆ ಬೆಂಬಲ ಬೆಲೆ ಹಾಗೂ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ರೈತರು,ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ರೈತರು ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆಯಲ್ಲಿ, ವಿಧಾನಸೌಧಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಅಲ್ಲದೇ,ವಿಧಾನಸೌಧದ ಎಲ್ಲಾ ದ್ವಾರಗಳಲ್ಲೂ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ವರಿದಿಯಾಗಿದೆ.
ರೈತ ಹೋರಾಟಗಾರರನ್ನು ಗೂಂಡಾಗಳು ಹಾಗೂ ನಾಲ್ಕು ವರ್ಷ ಕಾಲ ಎಲ್ಲಿ ಮಲಗಿದ್ದೀಯಮ್ಮಾ ಎಂದು ಕೇಳಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಖಾನಾಪುರದಲ್ಲಿ ರೈತರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
.