ವಾರ್ಧಾ: ಮಹಾರಾಷ್ಟ್ರದ ಪುಲ್ ಗಾಂವ್ ಸೇನಾ ಡಿಪೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ ಎಂದು ತಿಳಿದುಬಂದಿದೆ. ಆರ್ಟಿಲರಿ ಶೆಲ್ ಹೊರತೆಗೆಯುವಾಗ ಸ್ಫೋಟ ಸಂಭವಿಸಿದ್ದೇ ದುಂರಂತಕ್ಕೆ ಕಾರಣ ಎಂದು ಸೇನಾ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದ ಪುಲ್ ಗಾಂವ್ ಸೇನಾ ಡಿಪೋದಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಶಸ್ತ್ರಾಸ್ತ್ರ ನಿರ್ಮಾಣ ಕಾರ್ಖಾನೆಯ ಉದ್ಯೋಗಿ ಹಾಗೂ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಪೈಕಿ ನಾಲ್ಕು ಮಂದಿ ಸ್ಫೋಟ ಸಂಭವಿಸಿದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.
.