ಹೊನ್ನಾವರ :ಮನೆಯಲ್ಲಿ ಬಚ್ಚಿಟ್ಟಿದ್ದ ಆಮೆ ಮಾಂಸ ವನ್ನು ಹೊನ್ನಾವರ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ಹೊನ್ನಾವರದಲ್ಲಿ ನಡೆದಿದೆ.

ಮಾವಿನಕುರ್ವೆಯ ನಿವಾಸಿ ಬಸ್ತ್ಯಾವ್ ಲೋಪೀಸ್ ಬಂಧಿತ ಆರೋಪಿ. ಕೊಂಕಣ ರೈಲ್ವೆ ಸಿಬ್ಬಂದಿಯಾಗಿ ಇವರು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

RELATED ARTICLES  ವ್ಯಕ್ತಿತ್ವ ವಿಕಸನ ಹಾಗೂ ಮಾರ್ಗದರ್ಶನ ಶಿಬಿರ ಸಂಪನ್ನ

ಖಚಿತ ಮಾಹಿತಿ ಮೇರೆಗೆ ಹೊನ್ನಾವರ ಉಪ ವಲಯ ಅರಣ್ಯಾಧಿಕಾರಿ ವಸಂತ ರೆಡ್ಡಿ ಹಾಗೂ ಸಿಬ್ಬಂದಿಗಳಿಂದ ಏಕಕಾಲಕ್ಕೆ ದಾಳಿ ನಡೆಸಿ ಮನೆಯಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟ ಒಂದೂವರೆ ಕೆಜಿ ತೂಕದ ಆಮೆ ಮಾಂಸ ವನ್ನು ವಶಕ್ಕೆ ಪಡೆದು ಹೊನ್ನಾವರದ ನ್ಯಾಯಾಲಕ್ಕೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

RELATED ARTICLES  ಕಡ್ಲೆ – ಚಂದಾವರ ಭಾಗದ ಬಿ.ಜೆ.ಪಿ. ಮುಖಂಡರು ಕಾಂಗ್ರೆಸ್ ಸೇರ್ಪಡೆ

ಆರೋಪಿಗೆ 14 ದಿನಗಳ ವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಹೊನ್ನಾವರ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.