ಕುಲ್‌ಗ್ರಾಂ: ಉಗ್ರರು ಜಮ್ಮು ಮತ್ತು ಕಾಶ್ಮೀರದ ಕುಲ್‌ಗ್ರಾಂಜಿಲ್ಲೆಯ ಸೇನಾಶಿಬಿರದ ಮೇಲೆ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ ಎಂದು ತಿಳಿದುಬಂದಿದೆ.
ಖುದ್ವಾನಿ ಪ್ರದೇಶದಲ್ಲಿರುವ ಸೇನಾ ಶಿಬಿರದ ಬಳಿ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಉಗ್ರರ ವಿರುದ್ಧ ಸೇನಾಪಡೆಗಳು ಕಾರ್ಯಾಚರಣೆಗಿಳಿದಿವೆ. ಈ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ವರದಿಯಾಗಿದೆ.ಸೇನಾ ಯೋಧರ ದಾಳಿಗೆ ಉಗ್ರರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ದಾಳಿ ಸಂದರ್ಭದಲ್ಲಿ ಓರ್ವ ನಾಗರೀಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.