ಅಂಕೋಲಾ: ಕಟ್ಟಿಗೆ ತರಲು ಹೋಗಿದ್ದ‌ ಮಹಿಳೆ ರೈಲು ಮಾರ್ಗ ದಾಟುತ್ತಿರುವ ವೇಳೆ‌ ಮೃತ ಪಟ್ಟಿರುವ ಘಟನೆ ತಾಲೂಕಿನ ಬಾಳೆಗುಳಿ ರೈಲ್ವೆ ಮಾರ್ಗದಲ್ಲಿ ನಡೆದಿದೆ.

ಮಂಜುಳಾ ಗೌಡ (32) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಕಟ್ಟಿಗೆ ತರಲು ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ರೈಲು ಬಡಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾಳೆ.

ಈ ಬಗ್ಗೆ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.