ಗೋಕರ್ಣ: ಜಗದ್ಗುರು ಶಂಕರಾಚಾರ್ಯ ಗೋಕರ್ಣಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವಿಲ೦ಬ ಸಂವತ್ಸರದ ತ್ರಿಪುರಾಖ್ಯದೀಪೋತ್ಸವ ೨೨-೧೧-೨೦೧೮ ಗುರುವಾರ ವಿಜೃಂಭಣೆಯಿಂದ ಜರುಗಿತು.
ಲಕ್ಷಬಿಲ್ವಾರ್ಚನೆ , ಭೂತಬಲಿ, ವನಭೋಜನ, ದೇವಾಲಯದಲ್ಲಿ ಲಕ್ಷದೀಪೋತ್ಸವ , ಕೋಟಿತೀರ್ಥದಲ್ಲಿ ತೆಪ್ಪೋತ್ಸವ , ಕೊನೆಯಲ್ಲಿ ರಾತ್ರಿ ರಥೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ವೇ ಕೃಷ್ಣ ಭಟ್ ಷಡಕ್ಷರಿ ಪೂಜಾ ಕೈಂಕರ್ಯ ನೆರವೇರಿಸಿದರು . ಶ್ರೀ ದೇವಾಲಯದ ಹೊರ ಆವಾರ, ನಂದಿಮಂಟಪ , ಗರ್ಭಗುಡಿಯಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು .