ಕುಮಟಾ: ಜನತೆಯ ಮನಗೆಲ್ಲುವ ಮೂಲಕ ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಿರುವ ಕುಮಟಾ ವೈಭವದ ಮೂರನೇ ದಿನದ ಕಾರ್ಯಕ್ರಮ ಯಶಸ್ವಿಯಾಯಿತು.
ಕಾರ್ಯಕ್ರಮವನ್ನು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕುಮಾರ ಬಂಗಾರಪ್ಪ ಶಾಸಕ ಸುನಿಲ್ ನಾಯ್ಕ, ಸೂರಜ್ ನಾಯ್ಕ ಸೋನಿ ಹಾಗೂ ಇತರ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಕುಮಟಾ ವೈಭದವ ಅದ್ಭುತ ಸಂಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ತಾಂಡವ ಕಲಾನಿಕೇತನದ ಅಧ್ಯಕ್ಷರಾದ ಮಂಜುನಾಥ ನಾಯ್ಕ, ಕುಮಟಾ ವೈಭವದ ಅಧ್ಯಕ್ಷರಾದ ಶ್ರೀ ಶಿವಾನಂದ ಹೆಗಡೆ, ಗೌರವಾಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ, ಸರ್ವಾಧ್ಯಕ್ಷರಾದ ಎಂ.ಜಿ ಭಟ್ಟ ,ಸಾಂಸ್ಕೃತಿಕ ಸಮಿತಿ ಪ್ರಮುಖ ಕೃಷ್ಣಾನಂದ ಭಟ್ಟ ಹಾಗೂ ಇನ್ನಿತರರು ಹಾಜರಿದ್ದರು.
ವೇದಿಕೆಯ ಕಾರ್ಯಕ್ರಮದ ನಂತರ ನಡೆದ
ಖ್ಯಾತ ಗಾಯಕಿ ಶಮಿತಾ ಮಲ್ನಾಡ್, ಚೇತನ, ಶ್ವೇತಾ ಪ್ರಭು ಅವರ ತಂಡದಿಂದ ‘ಸಂಗೀತ ಸಂಜೆ’ ಕಾರ್ಯಕ್ರಮ ಜನ ಮೆಚ್ಚುಗೆ ಗಳಿಸಿತು.