ಹೊನ್ನಾವರ: ಎಂ.ಪಿ.ಇ. ಸೊಸೈಟಿಯ, ಎಸ್. ಡಿ. ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮುಂಡಗೋಡದ ಲೊಯೋಲ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದಿನಾಂಕ 19-11-2018ರಂದು ನಡೆದ ಜಿಲ್ಲಾ ಮಟ್ಟದ ಸಾಂಸ್ಕøತಿಕ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ.
ಜಾನಪದಗೀತೆಯಲ್ಲಿ ಅಖಿಲಾ ಎನ್. ಹೆಗಡೆ ಪ್ರಥಮ ಸ್ಥಾನ, ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಸ್ವಾತಿ ದಯಾನಂದ ಕಾಮತ್ ದ್ವಿತೀಯ ಸ್ಥಾನ ಹಾಗೂ ರಸಪ್ರಶ್ನೆಯಲ್ಲಿ ಹರ್ಷ ಡಿ. ಗಂಗೊಳ್ಳಿ, ಪ್ರಸನ್ನ ಮಂಜುನಾಥ ಹೆಗಡೆ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಭಾವಗೀತೆಯಲ್ಲಿ ಧನ್ಯಾ ವಿ.ಎಚ್ ಮತ್ತು ಭಾಗ್ಯಶ್ರೀ ನಾಯ್ಕ, ರಸಪ್ರಶ್ನೆಯಲ್ಲಿ ವಿನಿತ್ ಭಟ್ಟ ಮತ್ತು ಯೋಗೇಶ ಗೌಡ ತೃತೀಯ ಸ್ಥಾನಗಳಿಸುವುದರ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಘನ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.