Home Uttara Kannada ಶ್ರೀ ಸಂಗನಬಸವ ಮಹಾಸ್ವಾಮಿಗಳಿಗೆ ಗೋಕರ್ಣ ಗೌರವ

ಶ್ರೀ ಸಂಗನಬಸವ ಮಹಾಸ್ವಾಮಿಗಳಿಗೆ ಗೋಕರ್ಣ ಗೌರವ

ಪ ಪೂ ಶ್ರೀ ಶ್ರೀ ಸಂಗನಬಸವ ಮಹಾಸ್ವಾಮಿಗಳು , ಶ್ರೀಮಠ ಬಸವನಬಾಗೇವಾಡಿ ,  ವಿಜಯಪುರ  ಇವರು   ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  “ಗೋಕರ್ಣ ಗೌರವ”  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು. ಉಪಾಧಿವಂತ ಮಂಡಳಿ ಸದಸ್ಯ ಹಾಗೂ ಉದ್ಯಮಿ  ಶ್ರೀ ಕುಮಾರ ಮಾರ್ಕಾ೦ಡೆ ಇವರು ದೇವಾಲಯದ  ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ,  ತಾಮ್ರಪತ್ರ  ಸ್ಮರಣಿಕೆ ನೀಡಿ, ಗೌರವಿಸಿದರು .  ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ  ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .