ಯಲ್ಲಾಪುರ:-ಚಾಲಕನ ನಿಯಂತ್ರಣ ತಪ್ಪಿದ
ಕೇರಳ ರಾಜ್ಯದ ನೊಂದಣಿ ಹೊಂದಿರುವ ಖಾಸಗಿ ಬಸ್ ಪಲ್ಟಿಯಾದ ಘಟನೆ ಯಲ್ಲಾಪುರದ ಬೇಡ್ತಿ ನದಿ ಸೇತುವೆಯ ಬಳಿ ನಡೆದಿದೆ.
ಬಸ್ ಅನ್ನು ಅತೀ ವೇಗದಿಂದ ಚಾಲನೆ ಮಾಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಪಲ್ಟಿಯಾಗಿದೆ ಎನ್ನಲಾಗಿದೆ.
ಕೇರಳದಿಂದ ಪ್ರವಾಸಿಗರನ್ನು ಕರೆದೊಯ್ಯುತಿದ್ದ ಬಸ್ ಇದಾಗಿದ್ದು ಘಟನೆಯಲ್ಲಿ ಬಸ್ಸಿನಲ್ಲಿದ್ದ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.
ಗಾಯಾಳುಗಳಿಗೆ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಯಲ್ಲಾಪುರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.