ಹೊನ್ನಾವರ: ಎಂ.ಪಿ.ಇ. ಸೊಸೈಟಿಯ, ಎಸ್. ಡಿ. ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗದಗ ಜಿಲ್ಲೆಯ ನರೇಗಲ್‍ನ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದಿನಾಂಕ 28-11-2018ರಂದು ನಡೆದ ವಿಭಾಗ ಮಟ್ಟದ ಸಾಂಸ್ಕøತಿಕ ಸಹಪಠ್ಯ ಚಟುವಟಿಕೆಗಳ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಸ್ವಾತಿ ದಯಾನಂದ ಕಾಮತ್, ದ್ವಿತೀಯ ಸ್ಥಾನ ಹಾಗೂ ಜಾನಪದಗೀತೆಯಲ್ಲಿ ಅಖಿಲಾ ಎನ್. ಹೆಗಡೆ, ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ.

RELATED ARTICLES  ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು..!

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಘನ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.