ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.ಅಲ್ಲದೇ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಲೊರನ್ ನಿಂದ ಪೂಂಚ್ ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದು ಭೀಕರ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಭದ್ರತಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಹಲವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.