ನವದೆಹಲಿ : ಆನ್‌ಲೈನ್‌ನಲ್ಲಿ ಔಷಧಿಗಳನ್ನು ಮಾರಾಟ ಮಾಡುವುದನ್ನು ದೆಹಲಿ ಹೈಕೋರ್ಟ್ ಬುಧವಾರ ಬ್ಯಾನ್ ಮಾಡಿದೆ.
ಇ – ಫಾಮರ್ಮಾಸಿಸ್ಟ್‌ಗಳ ಮಾರಾಟ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ ಹಾಗೂ ದೆಹಲಿಯ ಎಎಪಿ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ತಕ್ಷಣದಿಂದಲೇ ಈ ಆದೇಶವನ್ನು ಜಾರಿಗೊಳಿಸುವಂತೆಯೂ ಹೈಕೋರ್ಟ್ ಸೂಚಿಸಿದೆ.
ಆನ್‌ಲೈನ್‌ನಲ್ಲಿ ಔಷಧ ಮಾರಾಟ ವಿರೋಧಿಸಿ ಔಷಧ ಮಾರಾಟಗಾರರು ಮುಷ್ಕರ ಹೂಡಿದ್ದರು. ಕರ್ನಾಟಕದಲ್ಲೂ ಸಹ ಮೆಡಿಕಲ್ ಸ್ಟೋರ್ ಗಳು ಬಂದ್ ಮಾಡಿ ಆನ್‌ಲೈನ್‌ನಲ್ಲಿ ಔಷಧ ಮಾರಾಟ ವಿರೋಧಿಸಿದ್ದವು.