ಚಾಮರಾಜನಗರ: ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸ್ವೀಕರಿಸಿ 5 ಜನ ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಆದರೆ ಮೂವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ.

ಸುಲ್ವಾಡಿಯ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮುಂದೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES  ಆಟವಾಡುವ ಸಂದರ್ಭದಲ್ಲಿ ಬಿದ್ದ ಬಾಲಕಿ ಸಾವು.

ಸುಲ್ವಾಡಿ ಗ್ರಾಮದ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದಲ್ಲಿ ಗೋಪುರದ ಶಂಕುಸ್ಥಾಪನೆ ಇಂದು ನಡೆದಿತ್ತು. ಈ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಭಕ್ತರು ಪ್ರಸಾದದ ರೂಪದಲ್ಲಿ ರೈಸ್ಬಾತ್ ಸೇವಿಸಿದ್ದಾರೆ. ಸ್ವಲ್ಪ ಸಮಯದ ನಂತರ ರೈಸ್ಬಾತ್ ಸೇವಿಸಿದ್ದ 80ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರೊಬ್ಬರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ . ಆದರೆ ಯಾವ ಕಾರಣಕ್ಕೆ ಅಸ್ವಸ್ಥರಾದರು ಎಂಬುದಾಗಿ ತಿಳಿದಿಲ್ಲ ಎಂದು ಭಕ್ತರು ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

RELATED ARTICLES  ಭಾಗವತ್ ಆಸ್ಪತ್ರೆಯಲ್ಲಿ ಸೇವೆ ಪ್ರಾರಂಭಿಸುತ್ತಿರುವ ಡಾ. ಸುಮಂತ್ ಬಳಗಂಡಿ