ಚಿಕ್ಕಬಳ್ಳಾಪುರ: ಇಂದು ಅನ್ಯಧರ್ಮಕ್ಕೆ ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದ ಮೂವರು ಮಹಿಳೆಯರನ್ನು ಸಾರ್ವಜನಿಕರು ತರಾಟೆಗೆ ತೆಗದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ಬಸ್ ನಿಲ್ದಾಣದಲ್ಲಿರುವ ಒಂಟಿ ಯುವತಿಯರನ್ನ ಟಾರ್ಗೆಟ್ ಮಾಡಿ ಅವರನ್ನು ಅನ್ಯಧರ್ಮಕ್ಕೆ ಮತಾಂತರಿಸಲು ಯತ್ನಿಸಿದ್ದರು ಎನ್ನಲಾಗಿದೆ.
ಆರೋಪಿಗಳಾದ ಮೂವರು ಮಹಿಳೆಯರನ್ನು ಭಾರತಿ, ನಿರ್ಮಲ ಹಾಗೂ ಐಶ್ವರ್ಯ ಎಂದು ಗುರುತಿಸಲಾಗಿದ್ದು, ಈ ಮಹಿಳೆಯರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಏಕಾಂಗಿಯಾಗಿರುತ್ತಿದ್ದ ಯುವತಿಯರ ಬಳಿ ಹೋಗಿ ತಮ್ಮ ಧರ್ಮಕ್ಕೆ ಸೇರುವಂತೆ ಮನಪರಿವರ್ತನೆಗೆ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಇದನ್ನು ಕಂಡ ಸ್ಥಳೀಯರು ಮನಪರಿವರ್ತನೆ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ನಂತರ ಮೂವರು ಮಹಿಳೆಯರನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಪೊಲೀಸರು ಮೂವರು ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.