ನವದೆಹಲಿ: ಇಂದು ಭಾರತರತ್ನ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ವಾಜಪೇಯಿ ಅವರು ಪ್ರಧಾನಿಯಾಗಿದ್ದ ವೇಳೆ ನಡೆಸಿದ ಆಡಳಿತದ ಕಾರ್ಯವೈಖರಿ ಮೇಲೆ ಬೆಳಕು ಚೆಲ್ಲಲು ಉತ್ತಮ ಆಡಳಿತ ದಿನವನ್ನ ಆಚರಿಸಲಾಗುತ್ತೆ. ಇದಷ್ಟೇ ಅಲ್ಲದೇ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ಇರುವ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕ ‘ಸದೈವ ಅಟಲ್’, ವಾಜಪೇಯಿ ಅವರ ಜನ್ಮದಿನದಂದೇ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES  ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ.

ಈ ಸ್ಮಾರಕವನ್ನು 10.51ಕೋಟಿ ರೂಪಾಯಿ ವೆಚ್ಚದಲ್ಲಿ ಅಟಲ್ ಸ್ಮೃತಿ ನ್ಯಾಸ್ ಸೊಸೈಟಿ ನಿರ್ಮಿಸಿದೆ. ರಾಜ್ಯ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ರಕ್ತದಾನ ಶಿಬಿರ, ಹಣ್ಣು-ಹಂಪಲು ವಿತರಣೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಅಟಲ್ ಜೀ ಅವರ ಜನ್ಮದಿನ ಆಚರಿಸಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ ಎನ್ನಲಾಗಿದೆ.

RELATED ARTICLES  ನವರಾತ್ರಿ ಸಂಭ್ರಮಕ್ಕೆ ವಿಶೇಷ ಮೆರುಗು ತಂದಿದೆ ಗುಜರಾತಿಗಳ ‘ದಾಂಡಿಯಾ’ ನೃತ್ಯ

ಅಟಲ್ ಜೀ ಅವರ ಆದರ್ಶ, ವಿಚಾರಗಳು ಹಲವರಿಗೆ ಮಾದರಿಯಾಗಿವೆ. ಹಾಗಾಗಿ ಅಂತಹ ಮಹಾನ್ ವ್ಯಕ್ತಿಗೆ ಗೌರವ ಸಲ್ಲಿಸುವುದಕ್ಕಾಗಿ ಸ್ಮಾರಕ ನಿರ್ಮಾಣ ಮಾಡಲಾಗಿದೆ ಎಂದು ಕರ್ತವ್ಯನಿರತ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ವರದಿಯಾಗಿದೆ.

ಇಂದು ಬೆಳಗ್ಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್, ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಅಟಲ್ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು ಎಂದು ತಿಳಿದುಬಂದಿದೆ.