ನವದೆಹಲಿ: ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಮಾಹಿತಿ ಪ್ರಕಟಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ.

ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಇಲ್ಲಿಯವರೆಗೂ ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ವಿಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿತ್ತು. ಆದರೆ ಇನ್ನುಮುಂದಿನ ದಿನಗಳಲ್ಲಿ ಆಯಾ ಪ್ರದೇಶಗಳ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಹೊರಡಿಸುವಂತೆ ಕೇಂದ್ರ ವಿಮಾನಯಾನ ಸಚಿವಾಲಯ ಆದೇಶ ನೀಡಿದೆ ಎಂದು ತಿಳಿದುಬಂದಿದೆ.

RELATED ARTICLES  ಪರಿವರ್ತನ ರಥಯಾತ್ರೆ : ಬೃಹತ್‌ ಸಮಾವೇಶಕ್ಕೆ ತಯಾರಿ

ನಾಗರೀಕ ವಿಮಾನಯಾನ ಸಚಿವ ಸುರೇಶ್ ಪ್ರಭುರವರ ಸೂಚನೆಯನ್ವಯ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ) ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಿಗೆ ಈ ಬಗ್ಗೆ ಮಾಹಿತಿ ರವಾನಿಸಿದೆ ಎನ್ನಲಾಗಿದೆ. ಅಲ್ಲದೇ ನೂತನ ಆದೇಶವು ಸೈಲೆಂಟ್ ವಿಮಾನ ನಿಲ್ದಾಣಗಳಿಗೆ ಅನ್ವಯಿಸುವುದಿಲ್ಲವೆಂದು ತಿಳಿಸಿದೆ ಎಂದು ವರದಿಯಾಗಿದೆ.

RELATED ARTICLES  ಹೆಚ್ಚಿದ ಕೊರೋನಾ ಪ್ರಕರಣ : ಮತ್ತೆ ಉತ್ತರಕನ್ನಡದಲ್ಲಿ ಬದಲಾಯ್ತು ಕೊರೋನಾ ನಿಯಮ.