ಬೆಂಗಳೂರು: ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ಭ್ರಷ್ಟಾಚಾರ ಆರೋಪ ಹೊತ್ತಿರುವ ಐದು ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಏಕಕಾಲದಲ್ಲಿ ಒಟ್ಟು 17 ಕಡೆ ಎಸಿಬಿ ದಾಳಿ ನಡೆದಿದೆ. ಬೆಂಗಳೂರು, ಚಿಂತಾಮಣಿ, ಹುಣಸೂರು, ಉಡುಪಿ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಕಾರವಾರ, ಮಂಗಳೂರು ಸೇರಿದಂತೆ ಒಟ್ಟು 17 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

RELATED ARTICLES  ನಾಳೆ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳ 25ನೇ ವರ್ಷದ ಚಾತುರ್ಮಾಸ್ಯ ಸೀಮೋಲ್ಲಂಘನ.

ಅಲ್ಲದೇ,ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಕೋ-ಆಪರೇಟಿವ್ ಬ್ಯೂರೋದ ಅಡಿಷನಲ್ ರಿಜಿಸ್ಟರ್ ಶಶಿಧರ್, ಬಿಬಿಎಂಪಿಯ ಪ್ಲಾನಿಂಗ್ ಅಡಿಷನಲ್ ಡೈರೆಕ್ಟರ್ ಬಿಸೆಟಪ್ಪ, ದಾವಣಗೆರೆ ಅಗ್ರಿಕಲ್ಚರ್ನ ಡೆಪ್ಯುಟಿ ಡೈರೆಕ್ಟರ್ ಹಂಸವೇಣಿ, ಗವರ್ನಮೆಂಟ್ ಕಾಲೇಜ್ ಆಫ್ ಟೀಚರ್ ಫೌಂಡೇಷನ್ ರೀಡರ್ ಮಂಜುನಾಥಯ್ಯ, ಮೂಡಾದ (ಮೈಸೂರು ಅರ್ಬನ್ ಡೆವಲಪ್ಮೆಂಟ್ ಅಥಾರಿಟಿ) ಜೂನಿಯರ್ ಇಂಜಿನಿಯರ್ ಕೆ.ಮಣಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.

RELATED ARTICLES  ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಇನ್ನುಮುಂದೆ ಸ್ಥಳೀಯ ಭಾಷೆಯಲ್ಲೇ ಅನೌನ್ಸ್ ಮೆಂಟ್..!