ಬೆಂಗಳೂರು: ಹೊಸ ವರ್ಷಕ್ಕೆ ಎಲ್ಲೆಂದರಲ್ಲಿ ಪಾರ್ಟಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಡಿಸೆಂಬರ್ 31ರ ರಾತ್ರಿ ರಸ್ತೆಗಳಲ್ಲಿ ಪೆಂಡಾಲ್ ಹಾಕಿ ಪಾರ್ಟಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಹೊಸ ವರ್ಷ ಆಚರಣೆಗೆ ಕಡ್ಡಾಯವಾಗಿ ಬಿಬಿಎಂಪಿಯಿಂದ ಅನುಮತಿ ಪಡೆಯಲೇಬೇಕಾಗಿದೆ. ಎಲ್ಲೆಲ್ಲೋ ಕುಣಿದು ಕುಪ್ಪಳಿಸುವಂತಿಲ್ಲ ಎಂದು ಹೇಳಿದ್ದಾರೆ.
ಹೊಸ ವರ್ಷದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರವಹಿಸಿದೆ. ಎಲ್ಲಾ ಮೇಲ್ಸೇತುವೆ ಮೇಲೆ ಡಿ.3ರಂದು ಸಂಜೆ 6ರಿಂದ ಜನವರಿ ಬೆಳಗ್ಗೆ ಗಂಟೆಯವರೆಗೆ ಮುಚ್ಚಲಾಗುತ್ತದೆ. ಸುಮಾರು 15 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ವರದಿಯಾಗಿದೆ.