ಬೆಂಗಳೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೊಲೀಸ್ ಅಕಾಡೆಮಿಯ ಉಪನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಮಧುಕರ್ ಶೆಟ್ಟಿ, ಕಳೆದ ಒಂದು ವಾರದಿಂದ ಹಚ್1 ಎನ್1 ನಿಂದ ಬಳಲುತ್ತಿದ್ದರು. ಹೈದ್ರಾಬಾದನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಧುಕರ್ ಶೆಟ್ಟಿ, ನಿನ್ನೆ ರಾತ್ರಿ 8:30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ. ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ರಾಜ್ಯದ ಐಪಿಎಸ್ ಅಧಿಕಾರಿ ವಿ.ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.”ಅತ್ಯುತ್ತಮ ಅಧಿಕಾರಿಯಾಗಿದ್ದ ಅವರು ನೇರ ನಡೆನುಡಿಗಳಿಂದ ಜನಪ್ರಿಯರಾಗಿದ್ದರು. ಅವರ ಅಕಾಲಿಕ ನಿಧನ ತೀವ್ರ ಆಘಾತ ಉಂಟು ಮಾಡಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ಆಘಾತ ಸಹಿಸುವ ಶಕ್ತಿ ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.
ಮಧುಕರ್ ಶೆಟ್ಟಿ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ , ಕೇಂದ್ರ ಸಚಿವ ಸದಾನಂದಗೌಡ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ,ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ ಎಂದು ವರದಿಯಾಗಿದೆ.