ಹೊನ್ನಾವರ: ತಾಲ್ಲೂಕಿನ ಹಾಡಗೇರಿಯು ಸಂಪೂರ್ಣವಾಗಿ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಊರು.
ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕನಾಗಿ ಸುನಿಲ್ ನಾಯ್ಕ ಆಯ್ಕೆಯಾದ ನಂತರ ಮೊದಲ ಬಾರಿಗೆ, ಈ ಹಳ್ಳಿಯ ಜನರ ಕಷ್ಟಗಳನ್ನು ಅರಿಯುವ ಮತ್ತು ಈ ಹಳ್ಳಿಯ ಪರಿಸ್ಥಿತಿಯ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡಲಾಗಿತ್ತು.
ಇಂದು ಹಾಡಗೇರಿಯ ಬಾಗದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಮೊದಲ ಹಂತವಾಗಿ 9.17 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.
ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈ ಒಂದು ಹಳ್ಳಿಯ ಜನರಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಸುನಿಲ್ ನಾಯ್ಕ ಇದೇ ಸಂದರ್ಭದಲ್ಲಿ ತಿಳಿಸಿದರು.