ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ಗಾಳಿ ಒತ್ತಡ ಕಡಿಮೆಯಾದ ಕಾರಣ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮಾಹಿತಿ ನೀಡಿದೆ ಎನ್ನಲಾಗಿದೆ.
ನಗರದ ಕೆಲವಡೆ ಕಳೆದೆರಡು ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ನಿನ್ನೆ ರಾತ್ರಿಯೂ ಕೆಲವಡೆ ಮಳೆ ಆಗಿದೆ ಎಂದು ತಿಳಿದುಬಂದಿದೆ.
ನಿನ್ನೆ ಸಂಜೆ 9.30 ರಿಂದ ಆರಂಭವಾದ ಮಳೆ ರಾತ್ರಿ 11ರ ವರೆಗೆ ಸುರಿಯಿತು. ಶಿವಾನಂದ ವೃತ್ತ, ಮೆಜೆಸ್ಟಿಕ್, ಚಾಲುಕ್ಯ ವೃತ್ತ, ಕೆ.ಆರ್. ಮಾರುಕಟ್ಟೆ, ಶಿವಾಜಿನಗರ, ಮಲ್ಲೇಶ್ವರ, ರಾಜಾಜಿನಗರ, ಆನಂದ್ ರಾವ್ ವೃತ್ತ ಸೇರಿದಂತೆ ಕೆಲವೆಡೆ ಮಳೆಯಾಗಿರುವ ವರದಿಯಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಎರಡು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ. ಹಾಸನ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕಡೆ ಜಾಸ್ತಿ ಮಳೆ ಆಗುವ ಸಂಭವವಿದೆ ಎಂದು ತಿಳಿದುಬಂದಿದೆ.
.