ಬೆಂಗಳೂರು: ಬೆಂಗಳೂರಿನ ಸಿದ್ಧಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಫುಡ್ ಪಾಯ್ಸನ್ನಿಂದ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ನಿನ್ನೆ ರಾತ್ರಿ ಊಟ ಮಾಡಿದ ಬಳಿಕ 5ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಾಡಿದ್ದಾರೆ. ಹಲವು ವಿದ್ಯಾರ್ಥಿಗಳು, ಹೊಟ್ಟೆಯಲ್ಲಿ ತಳಮಳ ಆಗಿತ್ತಿದೆ ಎಂದು ಹೇಳಿದ ಬಳಿಕ 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.
ಇದೆ ವೇಳೆ ಫುಡ್ ಪಾಯ್ಸನ್ ನಿಂದಾಗಿ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಗೊತ್ತಾಗಿದೆ. ಸದ್ಯ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.