ಮುಂಬೈ: ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನ ಹಿರಿಯ ನಟ ಹಾಗೂ ಅದ್ಭುತ ಡೈಲಾಗ್ ರೈಟರ್ ಖಾದರ್ ಖಾನ್ ಡಿಸೆಂಬರ್ 31ರ ಸಂಜೆ 6 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.
ಇವರು ವಯೋಸಹಜ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.
ನಟ ಖಾದರ್ ಖಾನ್ 81 ವರ್ಷ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ನಟನ ಸಾವಿನ ಸುದ್ದಿಯನ್ನು ಅವರ ಪುತ್ರ ಸರ್ಫರಾಜ್ ಖಚಿತಪಡಿಸಿದ್ದಾರೆ.
ನಾಲ್ಕು ದಿನಗಳ ಹಿಂದಷ್ಟೇ ಖಾದರ್ ಖಾನ್ ಮಗ ತಂದೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ತಿಳಿಸಿದ್ದರು.
300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಕಾದರ್ ಸಂವಾದ ಲೇಖನಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ತನ್ನ ಆಕರ್ಷಕ ಧ್ವನಿ ಹಾಗೂ ಅದ್ಭುತ ಕಾಮಿಕ್ ಟೈಮಿಂಗ್ ಗೆ ಸುಪ್ರಸಿದ್ಧರಾಗಿರುವ ಕಾದರ್ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದರು.