ಕುಮಟಾ : ಸರಕಾರಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮಣಕಿ ಬಳಿ ನಡೆದಿದೆ.
ಗೋಕರ್ಣದಿಂದ ಸಾಗರಕ್ಕೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಹುಬ್ಬಳ್ಳಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ಬಸ್ ನಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು ಗಾಯಗೊಂಡವರನ್ನ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ವೇಗಕ್ಕೆ ಲಾರಿ ಚಾಲಕ ಒಂದು ಕಾಲು ಸಂಪೂರ್ಣವಾಗಿ ನುಜ್ಜಾಗಿದೆ.ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಒಳಗಾದವರ ಸಂಬಂಧಿಕರ ರೋದನ ಮುಗಿಲು ಮುಟ್ಟಿದೆ.