ಬೆಂಗಳೂರು:  ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಕರೆ ನೀಡಿರುವ ‘ಭಾರತ್ ಬಂದ್’ನಿಂದಾಗಿ ರಾಜ್ಯದಲ್ಲೂ ಕೆಲ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಯಿದೆ. 

ಜನೆವರಿ 8 ಹಾಗೂ 9ರ ಭಾರತ್ ಬಂದ್‌ಗೆ ಕರೆ ನೀಡಿದ್ದು,   ಮಕ್ಕಳ ಭದ್ರತೆ ಮತ್ತು ರಕ್ಷಣೆ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. 

 ಸಾರಿಗೆ ರಂಗವನ್ನು ಕಾರ್ಪೊರೇಟ್‌ಗೆ ಪರಭಾರೆ ಮಾಡುವ ‘ಮೋಟಾರು ವಾಹನ (ತಿದ್ದುಪಡಿ) ಮಸೂದೆ-2017’ ಅನ್ನು ವಿರೋಧಿಸಿ ಹಾಗೂ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರಕಾರದ ವಿರುದ್ಧ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಜ.8 ಮತ್ತು 9ರಂದು ಕರೆ ನೀಡಿರುವ ಭಾರತ್‌ ಬಂದ್‌ನಿಂದಾಗಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

RELATED ARTICLES  ಕುಖ್ಯಾತ ಅಂತರ್ ರಾಜ್ಯ ಕಳ್ಳರು ಅಂದರ್ !

ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿ ಸೇರಿದಂತೆ 12 ಬೇಡಿಕೆಗಳನ್ನು ಮುಂದಿಟ್ಟುಕ್ಕೊಂಡು ಎಐಟಿಯುಸಿ, ಸಿಐಟಿಯು, ಐಎನ್‌ಟಿಯುಸಿ, ಎಲ್‌ಪಿಎಫ್‌ ಸೇರಿದಂತೆ ಇತರೆ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ರಾಷ್ಟ್ರವ್ಯಾಪ್ತಿ ಸಾರ್ವತ್ರಿಕ ಮುಷ್ಕರವನ್ನು ಹಮ್ಮಿಕೊಂಡಿವೆ. ”ಜ.8ರ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಜ.9ರ ಬುಧವಾರ ಸಂಜೆ 5 ಗಂಟೆ ವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಇಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಳ್ಳಲಿದೆ,” ಎಂದು ಎಐಟಿಯುಸಿ ಮುಖಂಡರು ತಿಳಿಸಿದ್ದಾರೆ.

RELATED ARTICLES  ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಸಿ.ವಿ.ಎಸ್.ಕೆ ಪ್ರೌಢಶಾಲೆಯಲ್ಲಿ ಇಸ್ರೋ ವತಿಯಿಂದ ‘ವಿಶ್ವ ಬಾಹ್ಯಾಕಾಶ ಸಪ್ತಾಹ’


ಈ ನಡುವೆ, ಭಾರತ್‌ ಬಂದ್‌ ಕರೆಗೆ ಜಗ್ಗದ ಕೆಎಸ್‌ಆರ್‌ಟಿಸಿ ಪೊಲೀಸರ ಬಿಗಿ ಭದ್ರತೆಯಲ್ಲಿ ಬಸ್‌ ಸೇವೆ ಮುಂದುವರೆಸುವುದಾಗಿ ತಿಳಿಸಿದೆ. ಆದರೆ, ಬಂದ್‌ ತೀವ್ರ ಸ್ವರೂಪ ಪಡೆದರೆ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಅದು ನಿರ್ಧರಿಸಿದೆ.

ಭಾರತ್‌ ಬಂದ್‌ಗೆ ಈಗಾಗಲೇ ಆಟೊ, ಟ್ಯಾಕ್ಸಿ ಮಾಲೀಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ನಡುವೆ ಎಸ್‌ಎಫ್‌ಐ ಸಂಘಟನೆ ಸಹ ಬಂದ್‌ಗೆ ಬೆಂಬಲ ಘೋಷಿಸಿದ್ದು, ಶಾಲಾ- ಕಾಲೇಜುಗಳ ಬಂದ್‌ಗೆ ಕರೆ ನೀಡಿದೆ.