ಕಾರವಾರ: ಜನವರಿ 8 ಹಾಗೂ 9ರ ಭಾರತ್ ಬಂದ್‌ಗೆ ಕರೆ ನೀಡಿದ್ದು, ಮಕ್ಕಳ ಭದ್ರತೆ ಮತ್ತು ರಕ್ಷಣೆ ದೃಷ್ಟಿಯಿಂದ ಜಿಲ್ಲೆಯಲ್ಲೂ ಶಾಲಾ- ಕಾಲೇಜುಗಳಿಗೆ ಜ.8ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.
ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಕರೆ ನೀಡಿರುವ ‘ಭಾರತ್ ಬಂದ್’ನಿಂದಾಗಿ ಜಿಲ್ಲೆಯಲ್ಲೂ ಕೆಲ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ರಜೆಯ ದಿನದ ಪಾಠಗಳನ್ನು ಪರ್ಯಾಯವಾಗಿ ಮುಂದಿನ ಭಾನುವಾರದಂದು ಸರಿದೂಗಿಸಲು ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.