ಕುಮಟಾ: ಮೋಟಾರು ವಾಹನ ತಿದ್ದುಪಡಿ ಮಸೂದೆ -2017 ಹಿಂಪಡೆಯಲು, ಸಾರಿಗೆ ಉದ್ದಿಮೆಯನ್ನ ರಕ್ಷಿಸಲು ಮತ್ತು ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ಕಾರ್ಮಿಕ ಸಂಘಟನೆಗಳು ಇಂದು ರಾಷ್ಟ್ರವ್ಯಾಪಿ ಬಂದ್​ಗೆ ಕರೆ ಕೊಟ್ಟಿವೆ. ಈ ಹಿನ್ನೆಲೆಯಲ್ಲಿ ಕುಮಟಾದಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಬೃಹತ್ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು .

RELATED ARTICLES  ಶವ ಸಂಸ್ಕಾರಕ್ಕೆ ಬಳಸುವ ಕಟ್ಟಿಗೆ ದರವನ್ನು ಇಳಿಸುವಂತೆ ಮನವಿ

ಕುಮಟಾದ ಗಿಬ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕನಿಷ್ಠ ವೇತನಕ್ಕಾಗಿ  ಹಾಗೂ ಕಾನೂನಿನಲ್ಲಿ ಕೆಲವು ತಿದ್ದುಪಡಿಗಳನ್ನು ತರಲು ಆಗ್ರಹಿಸಿದರು .

ಎರಡು ದಿನಗಳ ಭಾರತ ಬಂದ್ ಯಶಸ್ವಿಯಾಗಲಿ ಎಂದು ಘೋಷಣೆ ಕೂಗುವುದರ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು .ಬೃಹತ್ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದು ವಿಶೇಷವಾಗಿತ್ತು .

RELATED ARTICLES  ಮಾ ೪: ‘ಹಣತೆ’ ಜೊಯಿಡಾ (ಸೂಪಾ) ತಾಲೂಕು ಘಟಕ ಉದ್ಘಾಟನೆ

ಚಿತ್ರವರದಿ : ಶ್ರೀ ಜಯದೇವ ಬಳಗಂಡಿ ಕುಮಟಾ.