ಮುಂಡಗೋಡ :ಮೋಟಾರು ವಾಹನ ತಿದ್ದುಪಡಿ ಮಸೂದೆ -2017 ಹಿಂಪಡೆಯಲು, ಸಾರಿಗೆ ಉದ್ದಿಮೆಯನ್ನ ರಕ್ಷಿಸಲು ಮತ್ತು ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ಕಾರ್ಮಿಕ ಸಂಘಟನೆಗಳು ಇಂದು ರಾಷ್ಟ್ರವ್ಯಾಪಿ ಬಂದ್​ಗೆ ಕರೆ ಕೊಟ್ಟಿವೆ.

RELATED ARTICLES  ಮುರೂರು ವಿಷ್ಣು ಭಟ್ಟರಿಗೆ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ.

ಈ ಹಿನ್ನೆಲೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ನಡೆದಿದೆ.

ಶಿಡ್ಲಗುಂಡಿ ಗ್ರಾಮದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ ಮೃತ ಕಾರ್ಯಕರ್ತೆಯಾಗಿದ್ದಾರೆ. ಇನ್ನು ಭಾರತ ಬಂದ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು, ಮೆರವಣಿಗೆ ವೇಳೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೂಲಿಕಾರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಅವರು ಭಾಗವಹಿಸಿದ್ದರು. ಹೀಗೆ ಮೆರವಣಿಗೆಯಲ್ಲಿ ಸಾಗುತ್ತಾ ತಾಲೂಕು ಪಂಚಾಯತ್​​ ಸಮೀಪ ಬರುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ತಾಲೂಕು ಆಸ್ಪತ್ರೆಗೆ ಅವರನ್ನ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES  ಉತ್ತರ ಕನ್ನಡದ ಹಲವು ತಾಲೂಕಿನಲ್ಲಿ ಕೊರೋನಾ ಆರ್ಭಟ